
ಸಭೆ ನಡೆಯುತ್ತಿದ್ದಾಗ ವಕೀಲನ ವೇಷ ಧರಿಸಿ ಬಂದಿದ್ದ ಈ ಯುವಕ ಏಕಾಏಕಿ ಚಪ್ಪಲಿ ಎಸೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ನಡೆಯುತ್ತಿದ್ದಂತೆ ಆಕ್ರೋಶಗೊಂಡ ಸಮಾಜವಾದಿ ಪಕ್ಷದ ಕಾರ್ಯಕರ್ತರು ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ಯುವಕ ಯಾವ ಕಾರಣಕ್ಕೆ ಸ್ವಾಮಿ ಪ್ರಸಾದ್ ಮೌರ್ಯ ಅವರ ಮೇಲೆ ಚಪ್ಪಲಿ ಎಸೆದಿದ್ದಾನೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಕೃತ್ಯ ಎಸಗುತ್ತಿದ್ದಂತೆ ಆತ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಲು ಯತ್ನಿಸಿದ್ದು, ಆದರೆ ಆತನನ್ನು ಹಿಡಿದು ಥಳಿಸಿದ ಸಮಾಜವಾದಿ ಪಕ್ಷದ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.