ಶ್ರೀನಗರ: ಶೋಪಿಯಾನ್ ನಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಮಾಡಲಾಗಿದೆ. ಕಾಶ್ಮೀರ ಫ್ರೀಡಂ ಫೈಟರ್ ಸಂಘಟನೆ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದೆ.
ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿಯೇ ಆಘಾತಕಾರಿ ಘಟನೆ ನಡೆದಿದೆ. ಸಂಬಂಧಿಸಿದ ಸಂಘಟನೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಜಮ್ಮು ಮತ್ತು ಕಾಶ್ಮೀರ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ.
ಇಂದು ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು ಹತ್ಯೆಗೈದ ದಾಳಿಯ ಹಿಂದೆ ಒಬ್ಬ ಉಗ್ರನ ಕೈವಾಡವಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ದಕ್ಷಿಣ ಕಾಶ್ಮೀರ ರೇಂಜ್ ನ ಉಸ್ತುವಾರಿಯೂ ಆಗಿರುವ ಸೆಂಟ್ರಲ್ ಕಾಶ್ಮೀರದ ಉಪ ಪೊಲೀಸ್ ಮಹಾನಿರೀಕ್ಷಕ ಸುಜಿತ್ ಕುಮಾರ್ ಶನಿವಾರ ಹೇಳಿದ್ದಾರೆ.
ವಿಷಯಗಳು ಸ್ಪಷ್ಟವಾದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು. ಸೆಕ್ಯುರಿಟಿ ಗಾರ್ಡ್‌ಗಳು ಮತ್ತು ಪ್ರದೇಶದ ಉಸ್ತುವಾರಿ ಹೊಂದಿರುವ ಯಾವುದೇ ಅಧಿಕಾರಿಯ ಕಡೆಯಿಂದ ಯಾವುದೇ ಭದ್ರತಾ ಲೋಪ ಕಂಡುಬಂದರೆ, ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.