ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಸಮಸ್ಯೆ ಉಂಟಾದಲ್ಲಿ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್ ಆಗಲಿದೆ. 72 ಗಂಟೆಗಳೊಳಗೆ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ದಿನೇದಿನೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ವಿದ್ಯುತ್ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.