
ಕೋಲಾರ: ಶ್ರೀಮಾನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಇಬ್ಬರು ಆರೋಪಿಗಳನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮನ ಫೋಟೋ, ಗುಂಬಜ್ ಫೋಟೋ ಹಾಕಿ ಅಶೀಲ ಕಮೆಂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಇಬ್ಬರು ಕಿಡಿಗೇಡಿಗಳನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಬೇತಮಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಿಡಿಗೇಡಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಸುಂದರಪಾಳ್ಯ ಗ್ರಾಮದ ಜುಬೇರ್, ಮುಬಾರಕ್ ಬಂಧಿತ ಆರೋಪಿಗಳು.