alex Certify BIG NEWS: ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮಂಡ್ಯ: ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳಿಬ್ಬರೂ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಡ್ಯ ಮೂಲದ ಪ್ರಶಾಂತ್ ಎಂಬುವವರಿಂದ ಮುಂಗಡವಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈ ಎಸ್ ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...