alex Certify ಟೀಂ ಇಂಡಿಯಾ ಕ್ರಿಕೆಟಿಗರ ಟಪ್ಪಾಂಗುಚ್ಚಿ ಸ್ಟೆಪ್: ಒಂದೇ ದಿನದಲ್ಲಿ 9 ಮಿಲಿಯನ್ ವೀಕ್ಷಣೆ ಪಡೆದ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾ ಕ್ರಿಕೆಟಿಗರ ಟಪ್ಪಾಂಗುಚ್ಚಿ ಸ್ಟೆಪ್: ಒಂದೇ ದಿನದಲ್ಲಿ 9 ಮಿಲಿಯನ್ ವೀಕ್ಷಣೆ ಪಡೆದ ವಿಡಿಯೋ

Rohit Sharma, Shreyas Iyer and Shardul Thakur dance to tune of 'Shehri  Babu' - Watch | Cricket News | Zee Newsಇನ್ಸ್ಟಾಗ್ರಾಂನಲ್ಲಿ ಸದಾ ಒಂದಿಲ್ಲೊಂದು ವಿಡಿಯೋಗಳು ವೈರಲ್ ಆಗುತ್ತಿವೆ. ಇದೀಗ ಭಾರತ ಕ್ರಿಕೆಟ್ ತಂಡದ ಆಟಗಾರರ ಸರದಿ. ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಮತ್ತು ಶಾರ್ದೂಲ್ ಠಾಕೂರ್ ಅವರೊಂದಿಗೆ ಸೂಪರ್ ಹಿಟ್ ಹಾಡಿಗೆ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಅವರ ಡ್ಯಾನ್ಸ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.

ಕಾನ್ಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಚೊಚ್ಚಲ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ. ನಂತರ ಅವರು ತಾವು ತಂಗಿದ್ದ ಹೋಟೆಲ್ ನಲ್ಲಿ ರೋಹಿತ್ ಶರ್ಮಾ ಹಾಗೂ ಶಾರ್ದೂಲ್ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಈ ಡ್ಯಾನ್ಸ್ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ರೋಹಿತ್ ಶರ್ಮಾ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಮೈದಾನದಲ್ಲಿ ಮತ್ತು ಹೊರಗೆ ಅಯ್ಯರ್ ಅವರ ಕೌಶಲ್ಯವನ್ನು ಶರ್ಮಾ ಶ್ಲಾಘಿಸಿದ್ದಾರೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಅಪ್ಲೋಡ್ ಮಾಡಿದ 24 ಗಂಟೆಗಳೊಳಗೆ ಸುಮಾರು 9 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...