
ಸಿನಿಮಾ ಪ್ರಚಾರಕ್ಕೆ ತೆರಳಿದ್ದ ವೇಳೆ ನಟ ಶ್ರೇಯಸ್ ಮಂಜು ಕಾರು ಅಪಘಾತಕ್ಕೀಡಾಗಿರುವ ಘಟನೆ ಶಿರಾ ಬಳಿ ನಡೆದಿದೆ.
ನಿರ್ಮಾಪಕ ಕೆ.ಮಂಜು ಅವರ ಪುತ್ರ ನಟ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಸಿನಿಮಾ ಪ್ರಚಾರಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದರು. ಈ ವೇಳೆ ಶಿರಾ ಬಳಿ ಶ್ರೇಯಯ್ ತೆರಳುತ್ತಿದ್ದ BMW ಕಾರು ಅಪಘಾತಕ್ಕೀಡಾಗಿದೆ. ಕಾರಿನ ಒಂದು ಭಾಗಕ್ಕೆ ಹಾನಿಯಾಗಿದೆ. ಮಿರರ್ ಕೂಡ ಮುರಿದಿದೆ.
ಅಪಘಾತದಲ್ಲಿ ಶ್ರೇಯಸ್ ಮಂಜು ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.