
ಶ್ರೀರಾಮ ಜನ್ಮಭೂಮಿ ಟ್ರಸ್ಟ್ನ ಟ್ರಸ್ಟಿಗಳು, ಪ್ರಧಾನಿ ನರೇಂದ್ರ ಮೋದಿಯವರನ್ನು ಬುಧವಾರದಂದು ಭೇಟಿಯಾಗಿ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರವು 2024 ರ ಜನವರಿ 22ರಂದು ಲೋಕಾರ್ಪಣೆಗೊಳ್ಳಲಿದೆ.
ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಸಮಾರಂಭವು ಮಧ್ಯಾಹ್ನ 12:30 ರ ಸುಮಾರಿಗೆ ನೆರವೇರಲಿದೆ. ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಗರ್ಭಗುಡಿಯಲ್ಲಿ ಅಂದು ರಾಮನ ವಿಗ್ರಹವನ್ನು ಇರಿಸಲಾಗುತ್ತದೆ. ಮೂರು ಅಂತಸ್ತಿನ ಈ ದೇವಾಲಯದ ನೆಲ ಮಹಡಿಯ ಕಾಮಗಾರಿ ಪೂರ್ಣಗೊಂಡಿದ್ದು. ಜನವರಿ 14ರಿಂದ ರಾಮಲಲ್ಲಾನ ಪ್ರತಿಷ್ಟಾಪನೆಯ ಪ್ರಕ್ರಿಯೆಗಳನ್ನು ಟ್ರಸ್ಟ್ ಆರಂಭಿಸಲಿದೆ.