ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ನಡೆಸಲಿರುವ ದತ್ತಮಾಲಾ ಅಭಿಯಾನ ನವೆಂಬರ್ 4ರಿಂದ ಆರಂಭವಾಗಲಿದೆ.
ಕಳೆದ 20 ವರ್ಷಗಳಿಂದ ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ನಡೆಸುತ್ತಿದ್ದು, ಈಬಾರಿ ನ.4ರಿಂದ 10ರವರೆಗೆ ಆರು ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಸಲು ಸಿದ್ಧತೆ ನಡೆಸಿದೆ.
ನ.4ರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ರಾಜ್ಯಾದ್ಯಂತ ದತ್ತಮಾಲೆ ಧರಿಸಲಿದ್ದಾರೆ. ನವೆಂಬರ್ 10ರಂದು ಕೊನೆ ದಿನ ಚಿಕ್ಕಮಗಳೂರು ನಗರದಲ್ಲಿ ಧರ್ಮ ಸಭೆ, ಶೋಭಾಯಾತ್ರೆ ಬಳಿಕ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ಹೋಮ, ಹವನ, ಪೂಜೆ ನೆರವೇರಿಸಲಿದ್ದಾರೆ.
ಈಬಾರಿ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಶ್ರೀರಾಮ ಸೇನೆ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಆವರಣದಲ್ಲಿರುವ ಗೋರಿಗಳನ್ನು ನಾಗೇನಹಳ್ಳಿ ದರ್ಗಾಕ್ಕೆ ಸ್ಥಳಾಂತರ ಮಡಬೇಕು. ಇಸ್ಲಾಂ ಮುಕ್ತ ದತ್ತಪೀಠ ಹಿಂದೂಗಳಿಗೆ ನೀಡುವಂತೆ ಒತ್ತಾಯಿಸಿದೆ.