ಬೆಂಗಳೂರು: ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ವಿಚಾರಣೆಯ ಬಳಿಕ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.
20 ವರ್ಷದಿಂದ ಶ್ರೀರಾಮುಲು ಅವರ ನೆರಳಲ್ಲಿ ಬದುಕುತ್ತಿದ್ದೇನೆ. ಅವರ ಹೆಸರಿಗೆ ಕಳಂಕ ತರುವ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದ ಆಘಾತಕ್ಕೆ ಒಳಗಾಗಿದ್ದೇನೆ. ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ಅವರು ದೂರು ನೀಡಿದ್ದಾರೆ. ಅವರು ನನ್ನನ್ನು ಕರೆಯಿಸಿ ಮಾತನಾಡಬೇಕಿತ್ತು. ಆಗ ವಾಸ್ತವ, ಸತ್ಯಾಸತ್ಯತೆ ಗೊತ್ತಾಗುತ್ತಿತ್ತು. ಈ ಕೇಸ್ ನಲ್ಲಿ ನಾನು ಭಾಗಿಯಾಗಿಲ್ಲ. ತಪ್ಪು ಮಾಡಿಲ್ಲ. ಕಷ್ಟಪಟ್ಟು ದುಡಿದು ಬದುಕುವ ವ್ಯಕ್ತಿ ನಾನಾಗಿದ್ದು, ಅಡ್ಡ ದಾರಿ ಹಿಡಿಯುವುದಿಲ್ಲ. ಅಡ್ಡದಾರಿಯಲ್ಲಿ ಬದುಕುವುದಿಲ್ಲ ಎಂದು ಹೇಳಿದ್ದಾರೆ.
ಶ್ರೀರಾಮುಲು ನೆರಳಲ್ಲಿ ಇದ್ದೇನೆ. ಪ್ರಾಮಾಣಿಕ ಸೇವೆ ಸಲ್ಲಿಸುವಲ್ಲಿ ನಾನು ಒಬ್ಬನಾಗಿದ್ದೇನೆ. ರಾಮುಲು ಅವರಿಗೆ ಕಳಂಕ ತರುವ ಕೆಲಸವನ್ನು ಮಾಡುವುದಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.