ಬಳ್ಳಾರಿ: ಬಿಜೆಪಿ ರಾಜ್ಯ ಘಟಕದ ಸ್ಥಾನ ಕೊಟ್ಟರೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀರಾಮುಲು ರಾಜ್ಯಾಧ್ಯಕ್ಷ ಹುದ್ದೆ ಆಕಾಂಕ್ಷೆ ಹೊರ ಹಾಗಿದ್ದಾರೆ.
ಬಳ್ಳಾರಿಯಲ್ಲಿ ಬೆಂಬಲಿಗರ ಸಭೆ ನಡೆಸಿರುವ ಶ್ರೀರಾಮುಲು, ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಒಪ್ಪಿಕೊಳ್ಳುತ್ತೇನೆ. ಸಣ್ಣವರೆಲ್ಲಾ ರಾಜ್ಯಾಧ್ಯಕ್ಷರಾಗುತ್ತಿದ್ದಾರೆ. ಅದಕ್ಕೆ ರಾಜ್ಯಾಧ್ಯಕ್ಷ ಹುದ್ದೆಗೆ ವೋಟಿಂಗ್ ಮಾಡುತ್ತಿದ್ದಾರೆ. ನನಗೂ ರಾಜ್ಯಾಧ್ಯಕ್ಷನಾಗಬೇಕು ಎಂಬ ಆಸೆಯಿದೆ, ನೇಮಿಸಿದರೆ ಒಪ್ಪಿಕೊಳ್ಳುತ್ತೇನೆ ಎಂದರು.
ಚುನಾವಣೆ ನಡೆದರೆ ಒಪ್ಪಲ್ಲ, ಈಗಾಗಲೇ ನಾನು ಚುನಾವಣೆಯಲ್ಲಿ ಸೋತು ನಿರುದ್ಯೋಗಿಯಾಗಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕೂಡ್ಲಗಿಯಿಂದ ಸ್ಪರ್ಧಿಸುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.