ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಬಸಾಪುರ ಗೇಟ್ ನಲ್ಲಿ ನಿರ್ಮಿಸಿದ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟಿಸಿ ಅವರು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪರಿಶಿಷ್ಟ ಜಾತಿ, ಪಂಗಡದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಕಾರಣದಿಂದಾಗಿ ಶಾಲೆಗಳು ನಡೆಯದ ಕಾರಣ ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ಫೋನ್ ಖರೀದಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಲ್ಯಾಪ್ಟಾಪ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಶಿಕ್ಷಣ ನೀಡುವುದರಿಂದ ಮಕ್ಕಳಿಗೆ ಲ್ಯಾಪ್ಟಾಪ್ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಲ್ಯಾಪ್ಟಾಪ್ ನೀಡುವುದಾಗಿ ತಿಳಿಸಿದ್ದಾರೆ.