
ರಾಮನಗರ: ನಟಿ ಶ್ರುತಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಜೆಡಿಎಸ್ ಕಾರ್ಯಕರ್ತನ ವಿರುದ್ಧ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.
ಈ ಮೂಲಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುವವರಿಗೆ ಚುನಾವಣಾ ಅಧಿಕಾರಿಗಳು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತ ಜಿ.ಕೆ. ಗಂಗಾಧರ್ ಎಂಬುವರು ಬಿಜೆಪಿ ಮುಖಂಡರಾದ ನಟಿ ಶ್ರುತಿ ವಿರುದ್ಧ ಫೇಸ್ಬುಕ್ ಪೇಜ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಮನಗರ ಠಾಣೆ ಪೊಲೀಸರಿಗೆ ಚುನಾವಣಾ ಅಧಿಕಾರಿ ದೂರು ನೀಡಿದ್ದಾರೆ.