alex Certify ಏಕದಿನ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಶುಭ್​ಮನ್ ಗಿಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಕದಿನ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಶುಭ್​ಮನ್ ಗಿಲ್

ಇಂದು ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲನೆ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಸಾಕಷ್ಟು ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ  ಶುಭ್​ಮನ್ ಗಿಲ್ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.

ಈಗಾಗಲೇ ಭರ್ಜರಿ ಶತಕ ಸಿಡಿಸಿರುವ ಶುಭ್​ಮನ್ ಗಿಲ್  ಕೇವಲ 19 ಏಕದಿನ ಪಂದ್ಯದಲ್ಲಿ ಸಾವಿರ ರನ್ ಪೂರೈಸುವ ಮೂಲಕ ಅತಿ ವೇಗವಾಗಿ ಸಾವಿರ ರನ್ ಪೂರೈಸಿರುವ ಭಾರತದ ಮೊದಲನೇ ಆಟಗಾರರಾಗಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ 24 ಪಂದ್ಯಗಳಲ್ಲಿ ಸಾವಿರ ರನ್ ಪೂರೈಸಿದ್ದರು. ಈ ದಾಖಲೆಯನ್ನು ಇಂದು ಶುಭ್​ಮನ್ ಗಿಲ್ ಹಿಂದಿಕ್ಕಿದ್ದಾರೆ. ಮತ್ತೊಂದೆಡೆ ಏಕದಿನ ಕ್ರಿಕೆಟ್ ನಲ್ಲಿ ಇಂದು  ತಮ್ಮ ಮೂರನೇ ಶತಕ ಸಿಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...