alex Certify BREAKING: ಜಿಂಬಾಬ್ವೆ T20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್, ರಿಷಬ್ ಗೆ ವಿಶ್ರಾಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಿಂಬಾಬ್ವೆ T20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್, ರಿಷಬ್ ಗೆ ವಿಶ್ರಾಂತಿ

ನವದೆಹಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್‌ಗೆ ವಿಶ್ರಾಂತಿ ನೀಡಲಾಗಿದೆ.

ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರೂ ವಿಶ್ರಾಂತಿ ಪಡೆಯಲಿದ್ದಾರೆ. ಈ ಸರಣಿಯು ಜುಲೈ 6 ರಂದು ಹರಾರೆಯಲ್ಲಿ ಪ್ರಾರಂಭವಾಗಲಿದೆ. ನಂತರದ ಪಂದ್ಯಗಳು ಜುಲೈ 7, 10, 13 ಮತ್ತು 14 ರಂದು ಹರಾರೆಯಲ್ಲಿ ನಡೆಯಲಿವೆ.

ರೋಹಿತ್ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ನಿತೀಶ್ ರೆಡ್ಡಿ, ರಿಯಾನ್ ಪರಾಗ್, ಅಭಿಷೇಕ್ ಶರ್ಮಾ ಮತ್ತು ತುಷಾರ್ ದೇಶಪಾಂಡೆ ಅವರು ಅವಕಾಶ ಪಡೆದಿದ್ದಾರೆ.

ತಂಡ ಇಂತಿದೆ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (WK), ಧ್ರುವ್ ಜುರೆಲ್ (WK), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...