ಬೆಂಗಳೂರು: ಜನವರಿ 21 ರಂದು ದಾಸೋಹ ದಿನ ಎಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜನವರಿ 21 ರಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದ ದಿನವಾಗಿದ್ದು, ಅಂದು ದಾಸೋಹ ದಿನವಾಗಿ ಆಚರಿಸಲು ರೂಪುರೇಷೆ ಸಿದ್ಧಪಡಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನಡೆದಾಡುವ ದೇವರು ಎಂದೇ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುವ ಮೂಲಕ ಸ್ಮರಣೀಯವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.