ಚಿತ್ರದುರ್ಗ: ಗಣಿಬಾದಿತ ಪ್ರದೇಶ ಪಟ್ಟಿಯಿಂದ ಸಿದ್ದಾಪುರ ಗ್ರಾಮವನ್ನು ಹೊರಗಿಟ್ಟಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನವಣೆ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಚಿತ್ರದುರ್ಗ ಆಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಿರಂತರವಾಗಿ ಗಣಿಗಾರಿಕೆ ನಡೆಯುತ್ತಿದೆ. ಗಣಿ ಪ್ರದೇಶದಿಂದ 12 ಕೀ.ಮೀ ದೂರದಲಿರುವ ಅನೇಕ ಹಳ್ಳಿಗಳನ್ನು ಗಣಿಬಾದಿತ ಪಟ್ಟಿಗೆ ಸೇರಿಸಲಾಗಿದೆ. ಆದರೆ ಕೇವಲ 2 ಕೀ.ಮೀ ದೂರದಲ್ಲಿರುವ ಸಿದ್ದಾಪುರ ಗ್ರಾಮವನ್ನು ಗಣಿಬಾದಿತ ಪ್ರದೇಶದಿಂದ ಹೊರಗಿಡಲಾಗಿದೆ. ಇದರಿಂದ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಡಿಎಂ ಎಫ್ ಫಂಡ್ ಇಲ್ಲದೇ ಗ್ರಾಮದ ಅಭಿವೃದ್ಧಿಯಾಗುತ್ತಿಲ್ಲ.
ಗಣಿಗಾರಿಕೆಯಿಂದಾಗಿ ಈ ಭಾಗದ ಗ್ರಾಮದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿದೆ. ಇದರಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಈಬಾರಿ ಮತದಾನ ಬಹಿಷ್ಕರಿಸುವುದಾಗಿ ಹೇಳಿದ್ದಾರೆ.