ದಾವಣಗೆರೆ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷಗಳ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಏರಿಸಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬಸ್ ಟಿಕೆಟ್ ದರ ಏರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.
ಇದೇ ವೇಳೆ ರಾಜ್ಯ ಬಜೆಟ್ ಮಂಡನೆ ವಿಚಾರವಾಗಿ ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿಸಲಾಗುವುದು ಎಂದರು. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದರು.