alex Certify BIG NEWS: ರಾಜ್ಯದಲ್ಲಿ 13 ಸಾವಿರ ಉದ್ಯೋಗ ಸೃಷ್ಟಿಯ 34 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಒಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 13 ಸಾವಿರ ಉದ್ಯೋಗ ಸೃಷ್ಟಿಯ 34 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಒಪ್ಪಿಗೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.

ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ 13,911 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ ಕಾನ್‌ ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.

ಫಾಕ್ಸ್‌ ಕಾನ್‌ ಈಗಾಗಲೇ ರಾಜ್ಯದಲ್ಲಿ 8,000 ಕೋಟಿ ರೂ.ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್(4,960 ಕೋಟಿ ರೂ.), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್(3,804 ಕೋಟಿ ರೂ.), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (3237.30 ಕೋಟಿ ರೂ.), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್(3273 ಕೋಟಿ ರೂ.ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌(607 ಕೋಟಿ ರೂ.ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಹೆಚ್‌ಎಲ್‌ಸಿಸಿ’ ಅನುಮೋದನೆ  ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು 9,461  ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ” ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...