
ಬೆಳಗಾವಿ: ಮತ್ತೆ ಬಾದಾಮಿಯಿಂದ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವಂತೆ ಕ್ಷೇತ್ರದ ಜನ ಒತ್ತಾಯಿಸುತ್ತಿದ್ದಾರೆ. ಸಾವಿರಾರು ಮಹಿಳೆಯರು ಪತ್ರ ಬರೆದಿದ್ದಾರೆ. ಆದರೆ, ವಾರಕ್ಕೊಮ್ಮೆಯಾದರೂ ಅಲ್ಲಿಗೆ ಭೇಟಿ ನೀಡಲು ಆಗುತ್ತಿಲ್ಲ. ಕಾರಣ ಜನರ ಕಷ್ಟ ಸುಖಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಾದಾಮಿಯಿಂದ ಸ್ಪರ್ಧಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ.
ಕೋಲಾರ, ಚಾಮರಾಜಪೇಟೆ, ವರುಣಾ ಕ್ಷೇತ್ರಗಳಿಂದ ಸ್ಪರ್ಧೆಗೆ ನನಗೆ ಆಹ್ವಾನವಿದೆ. ಆದರೆ, ನಾನು ಎಲ್ಲಿ ಸ್ಪರ್ಧೆ ಮಾಡಬೇಕೆಂಬುದರ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ನನಗೆ ಕ್ಷೇತ್ರವೇ ಇಲ್ಲ ಎನ್ನುತ್ತಿರುವ ಬಿಜೆಪಿಯವರಿಗೆ ಬುದ್ಧಿಯೇ ಇಲ್ಲ ಎಂದು ಹೇಳಿದ್ದಾರೆ.