
ಕಾರವಾರ: ವೈಯಕ್ತಿಕವಾಗಿ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಶುಭ ಕೋರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮಾತನಾಡಿದ ಸಿಎಂ, ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ್ದಕ್ಕೆ ನಮಗೂ ಸಂತಸವಿದೆ. ಅದ್ದೂರಿಯಾಗಿ ಬರ್ತಡೇ ಆಚರಿಸಿಕೊಂಡಿದ್ದರ ಬಗ್ಗೆ ಅವರೇ ಉತ್ತರಿಸಬೇಕು ಎಂದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾದ ಸುರತ್ಕಲ್ ನ ಫಾಝಿಲ್ ಅವರ ಮನೆಗೂ ಭೇಟಿ ನೀಡುತ್ತೇವೆ. ಹಿಂದೂ, ಮುಸ್ಲಿಂ ಎಂದು ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿಯೇ ಫಾಝಿಲ್ ಕುಟುಂಬದವರನ್ನು ಭೇಟಿ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.