alex Certify ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿಕೆಶಿ ವಿರುದ್ಧ ಅಶೋಕ್ ಸ್ಪರ್ಧೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿಕೆಶಿ ವಿರುದ್ಧ ಅಶೋಕ್ ಸ್ಪರ್ಧೆ…?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿದ್ದಾರೆ.

ಸ್ವಕ್ಷೇತ್ರಗಳಲ್ಲಿಯೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಮುಂದಾಗಿರುವ ಬಿಜೆಪಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದಿಂದ ಸಚಿವ ಸೋಮಣ್ಣ ಮತ್ತು ಡಿ.ಕೆ. ಶಿವಕುಮಾರ್ ಸ್ಪರ್ಧಿಸುವ ಕನಕಪುರ ಕ್ಷೇತ್ರದಿಂದ ಸಚಿವ ಆರ್ ಅಶೋಕ್ ಆವರನ್ನು ಕಣಕ್ಕಿಳಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. ಸಚಿವರಾದ ಸೋಮಣ್ಣ ಮತ್ತು ಆರ್. ಅಶೋಕ್ ಎರಡು ಕಡೆ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಆರ್. ಅಶೋಕ್ ಪ್ರತಿನಿಧಿಸುತ್ತಿರುವ ಪದ್ಮನಾಭನಗರದ ಜೊತೆಗೆ ಕನಕಪುರದಿಂದಲೂ ಕಣಕ್ಕಿಳಿಯುವ ಸಾಧ್ಯತೆ ಇದೆ. ಸೋಮಣ್ಣ ಅವರಿಗೆ ಪ್ರತಿನಿಧಿಸುತ್ತಿರುವ ಗೋವಿಂದರಾಜನಗರ ಕ್ಷೇತ್ರದ ಜೊತೆಗೆ ವರುಣಾದಿಂದ ಸ್ಪರ್ಧಿಸಲಿದ್ದಾರೆ. ಇಲ್ಲವಾದಲ್ಲಿ ವರುಣಾ ಜೊತೆಗೆ ಅವರು ಬಯಸಿದ ಕ್ಷೇತ್ರದಿಂದ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...