ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಹೈಕೋಟ್ ಅಸ್ತು ಎಂದಿದೆ. ಈ ನಡುವೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಯೂ ವಿಚಾರಣೆ ನಡೆಯಲಿದ್ದು, ಕೋರ್ಟ್ ಆದೇಶದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೇ ಪ್ರತಿಭಟನೆ ಮೂಲಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದೆ.
ಮುಡಾ ಹಗರಣ ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಪ್ರಕಟವಾಗುತ್ತಿದ್ದಂತೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ.
ಇನ್ನೊಂದೆಡೆ ಜೆಡಿಎಸ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದು, ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.