ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ವಿಪಕ್ಷಗಳ ಕೂಗು ಇನ್ನಷ್ಟು ಜೋರಾಗಿದೆ.
ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದ ವಿವಿಧ ಜಿಲೆಗಳಲ್ಲಿಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮೈಸೂರು, ಹುಬ್ಬಳ್ಳಿ, ಹಾಸನ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಮಯ್ಯ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ ಎಂದು ಆಗ್ರಹಿಸಿದ್ದಾರೆ.