ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರು ಬಿಗಿಪಟ್ಟು ಹಿಡಿದಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾ ಭಾಗವಾಗಿ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ಮುಖಂಡರನ್ನು ತಡೆದು, ವಾಹನಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ, ಅರವಿಂದ ಬೆಲ್ಲದ್, ಸುನೀಲ್ ಕುಮಾರ್, ಅಶ್ವತ್ಥ ನಾರಾಯಣ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.