alex Certify ವೋಟರ್ ಐಡಿ ಅಕ್ರಮದಲ್ಲಿ ಸಿಎಂ ಭಾಗಿ ಆರೋಪ: ಸಿದ್ಧರಾಮಯ್ಯರಿಗೆ ಬಿಜೆಪಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೋಟರ್ ಐಡಿ ಅಕ್ರಮದಲ್ಲಿ ಸಿಎಂ ಭಾಗಿ ಆರೋಪ: ಸಿದ್ಧರಾಮಯ್ಯರಿಗೆ ಬಿಜೆಪಿ ತಿರುಗೇಟು

ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಟ್ವೀಟ್ ಮಾಡಿ ಬಿಜೆಪಿ ತಿರುಗೇಟು ನೀಡಿದೆ.

ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ ಮತ್ತು ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ ಎಂದು ಹೇಳಲಾಗಿದೆ.

ಕುಂಕುಮಧಾರಿಗಳನ್ನು ಕಂಡರೇ ಭಯಪಡುವ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿಯನ್ನು ಕಂಡರೆ ಅದಿನ್ನೆಷ್ಟು ಭಯವಿರಬೇಡ ಪಾಪ. ಯಾವುದೇ ಕ್ಷೇತ್ರದ ಹುಡುಕಾಟದಲ್ಲಿರುವ ಅವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ ಎಂದು ಬಿಜೆಪಿ ಹೇಳಿದೆ.

ದೇಶದ ಎರಡನೇ ಲೋಕಸಭಾ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಲಿಸುವ ಏಕಮಾತ್ರ ಕಾರಣಕ್ಕಾಗಿ ಬ್ಯಾಲೆಟ್ ಪೇಪರ್ ಬಣ್ಣ ಬದಲಿಸಿ, ಜನರ ಹಾದಿ ತಪ್ಪಿಸಿ ವಾಮಮಾರ್ಗದಲ್ಲಿ ಕಾಂಗ್ರೆಸ್ ಸೋಲಿಸಿತು. ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮದ ಬಗ್ಗೆ ಏನು? ಹೇಳುವಿರಿ ಎಂದು ಪ್ರಶ್ನಿಸಲಾಗಿದೆ.

ಚುನಾವಣಾ ಅಕ್ರಮವೆಸಗಿ ಆರು ವರ್ಷ ಅಲಹಾಬಾದ್ ಹೈಕೋರ್ಟ್‌ನಿಂದ ಇಂದಿರಾ ಗಾಂಧಿ ಶಿಕ್ಷೆಗೆ ಒಳಪಟ್ಟಿದ್ದರು. ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು. ಸಿದ್ಧರಾಮಯ್ಯ ಅವರೇ, ಈ ಚುನಾವಣಾ ಅಕ್ರಮಗಳನ್ನು ನೀವು ಎಂದಾದರೂ ಪ್ರಶ್ನಿಸಿದ್ದೀರಾ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...