![](https://kannadadunia.com/wp-content/uploads/2020/03/yeddyurappa.jpg)
ಸಿದ್ದರಾಮಯ್ಯ ಅವರ ಹಗುರ ಮಾತಿಗೆ ಉತ್ತರ ಕೊಡುವುದಿಲ್ಲ. ಎಲ್ಲದಕ್ಕೂ ಅಧಿವೇಶನದಲ್ಲಿ ಉತ್ತರ ಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಂತೆಮರಹಳ್ಳಿಯಲ್ಲಿ ಮಾತನಾಡಿದ ಅವರು, ಜಾತಿ ಬಲ, ಹಣ ಬಲ ಬಳಸಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತಿತ್ತು. ಈಗ ಆ ಪಕ್ಷಕ್ಕೆ ಅಡ್ರೆಸ್ ಇಲ್ಲವಾಗಿದೆ. 26 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಉಸಿರಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ 130 ಸೀಟು ಗೆಲ್ಲುತ್ತೇವೆ. ಹಳ್ಳಿಗಳಿಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ಇಲ್ಲಿನ ಜನರ ಉತ್ಸಾಹ ನೋಡಿ ಶಿವಮೊಗ್ಗದಲ್ಲಿ ಭಾಷಣ ಮಾಡಿದಂತೆ ಆಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.