
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆಗೆ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೆ ಅನುಮೋದನೆ ದೊರೆತಿದೆ. ಎಲ್ಲಾ ಸಚಿವರು ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭಕೋರಿದರು.