ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 15ನೇಯ ಬಜೆಟ್ ಮಂಡಿಸಲಿದ್ದು, 2024-25ನೇ ಸಾಲಿನ ರಾಜ್ಯದ ಆಯವ್ಯಯದ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ.
ಹಣಕಾಸು ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಈಗಾಗಲೇ ಹಸ್ತಾಂತರಿಸಿದ್ದು, ಈ ಬಾರಿ ಸೂಟ್ ಕೇಸ್ ಬದಲಾಗಿ ಬ್ಯಾಗ್ ನಲ್ಲಿ ಅಜೆಟ್ ಪ್ರತಿ ಇರುವುದು ವಿಶೇಷ. ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಬಜೆಟ್ ಹಿನ್ನೆಲೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿದರು.
ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ದೊರೆತಿದ್ದು, ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧನಸಭೆಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭಾ ಚುನವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಜೆ ನಲ್ಲಿ ಹಲವು ಮಹತ್ವದ ಘೋಷಣೆ ಮಾಡುವ ನಿರೀಕ್ಷೆ ಇದೆ.