ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ರಾಮಕೃಷ್ಣ ಹೆಗಡೆ ಅವರ 13 ಬಜೆಟ್ ದಾಖಲೆ ಮುರಿದು 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
3.35 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಒತ್ತಡ, ನೀರಾವರಿ ಯೋಜನೆಗಳಿಗೆ ಹಣ ಮೀಸಲಿಡುವುದು, ನೌಕರರ ವೇತನ ಹೆಚ್ಚಳ, ರಾಜ್ಯದ ಆರ್ಥಿಕ ಸ್ಥಿತಿ ಮೇಲೆತ್ತುವ ವಿವಿಧ ಸವಾಲುಗಳು, ಒತ್ತಡ ನಡುವೆ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.
ಸಿದ್ದರಾಮಯ್ಯ ಮಂಡಿಸುವ ಬಜೆಟ್ ಇತಿಹಾಸ ಸೃಷ್ಟಿಸಲಿದೆ. ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಅವರು ಪಾತ್ರರಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯ ಇಂದು 14ನೆಯ ಬಜೆಟ್ ಮಂಡಿಸಲಿದ್ದಾರೆ.