ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿಪೂರ್ವ ಉಪನ್ಯಾಸಕರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಶೀಘ್ರದಲ್ಲಿಯೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.