
ಬೆಂಗಳೂರು: ಬೆಂಗಳೂರಿನ ಬಡಜನರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಬಡಜನರಿಗಾಗಿ ಉಚಿತ ಪ್ರಯೋಗಾಲಯ ಸೇವೆ ಒದಗಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇದಕ್ಕಾಗಿ 430 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. 20 ಕೋಟಿ ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಉಪಕರಣ ಖರೀದಿಗೆ 400 ಕೋಟಿ ಅನುದಾನ ನೀದಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 130 ಕೋಟಿ ರೂ ಒದಗಿಸಲಾಗುವುದು ಎಂದರು.