alex Certify BIG NEWS: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಲಿ; ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸವಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಲಿ; ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸವಾಲು


ಕಲಬುರ್ಗಿ: ನಾವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ತಾಕತ್ತಿದ್ದರೆ ಬಿಜೆಪಿಯವರು ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕಲಬುರ್ಗಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ನಾಯಕರು ಅಪಹಾಸ್ಯ ಮಾಡುತ್ತಿದ್ದಾರೆ. 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ ಎಂದರು.

ವಿಪಕ್ಷದವರು ಮಾತ್ರವಲ್ಲ, ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು. ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿದರು ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಕೊಟ್ಟಂತಹ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದೆ. 30 ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದೆವು. ಆದ್ದರಿಂದ ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡಿದರು. ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ 76 ಭರವಸೆಗಳನ್ನು ಜಾರಿಗೆ ತರಲಿದೆ.
ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವತ್ರಿಕ ಮೂಲ ಆದಾಯ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಕರ್ನಾಟಕದಲ್ಲಿ ಕರ್ನಾಟಕ ಮಾದರಿ- ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...