ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್ ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿರುವ ನೋಟಿಸ್ ವಾಪಾಸ್ ಪಡೆಯುವುದಾಗಿ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಜಯಪುರದ ಹುನವಾಡ ಗ್ರಾಮದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಹಿಂಪಡೆಯುತ್ತೇವೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಯಾವುದೇ ರೈತರನ್ನು ಸರ್ಕಾರ ಒಕ್ಕಲೆಬ್ಬಿಸುವುದಿಲ್ಲ. ಈಗಾಗಲೇ ಮೂವರು ಸಚಿವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ವಿಜಯಪುರದಲ್ಲಿ ಯಾವುದೇ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ಹಿಂಪಡೆಯಲಾಗುವುದು ಎಂದರು.
ಇನ್ನು ಯಾದಗಿರಿ ಹಾಗೂ ಧರವಾಡ ಜಿಲ್ಲೆಗಳಲ್ಲಿಯೂ ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ವಿಚಾರವಾಗಿ, ಈ ಬಗ್ಗೆ ಪರಿಶೀಲಿಸಲಾಗುವುದು. ಕಂದಾಯ ಸಚಿವರಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.