
ಬೆಂಗಳೂರು: ಯಾವುದೇ ಇಲಾಖೆಗಳ ಅಧಿಕಾರ ವರ್ಗಾವಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳಿಗೆ ಖಡಕ್ ಆಗಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರುಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಕಳೆದ ವರ್ಷ ವರ್ಗಾವಣೆ ವಿಚರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದವು. ಹಾಗಾಗಿ ಈಗ ಮತ್ತೆ ಈ ವಿಚಾರ ಕೈಗೆತ್ತಿಕ್ಕೊಳ್ಳದಿರುವುದು ಜಾಣತನ. ಯಾವುದೇ ಇಲಾಖೆಗಳ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಸಾಮಾನ್ಯವಾಗಿ ಪ್ರತಿವರ್ಷ ಮೇ ಮತ್ತು ಜೂನ್ ಅವಧಿಯಲ್ಲಿ ಶೇ.6 ರಿಂದ 8 ರಷ್ಟು ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸರ್ವೇ ಸಾಮಾನ್ಯ. ಆದರೆ ಈ ವರ್ಷ ಜೂನ್ 6ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದ್ದಕಾರಣ ಸರ್ಕಾರ ವರ್ಗಾವಣೆ ಮಾಡಿಲ್ಲ. ಹೀಗಾಗಿ ಕೆಲ ಇಲಾಖೆಗಳ ಅಧಿಕಾರಿಗಳ ವರ್ಗಾವಣೆಗೆ ಒತ್ತಡ ಹಾಕಲಾಗುತ್ತಿದೆ ಎನ್ನಲಾಗಿದೆ.