alex Certify ಎಲ್ಲಾ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ 2000 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಟಿ, ಟೌನ್ ರಸ್ತೆಗಳ ಅಭಿವೃದ್ಧಿಗೆ ಹೆಚ್ಚುವರಿ ಹಣ ನೀಡುತೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿದ್ದಾರೆ. ಇದು ಖಚಿತ ಎಂದರು.

ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ. ಎದೆ ಎತ್ತಿ ಮಾತನಾಡಿ ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.

ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್…

ಸತ್ಯದ ದಾಖಲೆಗಳನ್ನು, ಅಂಕಿ ಅಂಶಗಳನ್ನು ಜನರ ಮುಂದಿಟ್ಟು ಎದೆ ಎತ್ತಿ ಸತ್ಯ ಹೇಳಿ: ಸಿ.ಎಂ ಕರೆ

ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ,ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಎಉವ ನೈತಿಕತೆ ಇಲ್ಲ

once a waqf property… Always a waqf property ಅಂತ ಸುಪ್ರೀಂಕೋರ್ಟ್ ಜಡ್ಜ್ ಮೆಂಟ್ ಬಂದಿವೆ.

ಸಚಿವ ಜಮೀರ್ ಅವರು ಸಮರ್ಥವಾಗಿ ಉತ್ತರ ನೀಡುತ್ತಾರೆ. ಪರಿಷತ್ ನಲ್ಲಿ ಈಗಾಗಲೇ ಕೊಟ್ಟಿದ್ದಾರೆ

ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ

ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ

176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ

ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ

ಉತ್ತರ ಕರ್ನಾಟಕದ ಅಭಿವೃದ್ಧಿಗೆ 371ಜೆ ಸಂವಿಧಾನ ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ತಿರಸ್ಕರಿಸಿದ್ದರು. ಇದು ಬಿಜೆಪಿಯ ಸತ್ಯವಾದ ಮುಖ. ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿದ್ದು, ಕಾನೂನು ಮಾಡಿದ್ದು, ಜಾರಿ ಮಾಡಿದ್ದೆಲ್ಲಾ ಕಾಂಗ್ರೆಸ್ ಸರ್ಕಾರವೇ. ಈಗ ಹೊಸದಾದ ಗೋವಿಂದರಾವ್ ಸಮಿತಿ ರಚಿಸಿರುವುದೂ ನಮ್ಮದೇ ಸರ್ಕಾರ

ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಬಸವರಾಜ ಬೊಮ್ಮಾಯಿ ಅವರು ಪ್ರಾಮಿಸ್ ಮಾಡಿದರು. ಆದರೆ ಅವರು ಮುಖ್ಯಮಂತ್ರಿಯಾಗಿ, ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದ್ದರೂ ತಮ್ಮ ಪ್ರಾಮಿಸ್ ಉಳಿಸಿಕೊಳ್ಳಲಿಲ್ಲ

ಅವರಿಗೆ ಅವಕಾಶ ಇದ್ದಾಗ ಏನೂ ಮಾಡಲಿಲ್ಲ. ಈಗಲೂ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಮಹದಾಯಿ ಸಮಸ್ಯೆ ಬಗೆಹರಿಸಲು ಏನೂ ಮಾಡುತ್ತಿಲ್ಲ. ಹೀಗಾಗಿ ಬಿಜೆಪಿ ಬರೀ ಬೊಗಳೆ ಹೀಗಾಗಿ ಬಿಜೆಪಿ ನೈತಿಕವಾಗಿ ಕುಸಿದಿದ್ದಾರೆ. ನಾವು ಮೂರೂಕ್ಕೆ ಮೂರೂ ಉಪ ಚುನಾವಣೆಯಲ್ಲಿ ನಾವು ಗೆದ್ದಿರುವುದು, ಬಿಜೆಪಿ ಕೈಯಿಂದ ಎರಡು ಸೀಟುಗಳನ್ನು ಕಾಂಗ್ರೆಸ್ ಗೆದ್ದಿರುವುದು ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿರುವುದಕ್ಕೆ ಷ್ಪಷ್ಟ ನಿದರ್ಶನ

ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಮಾಡಿದ ಸರಣಿ ಸುಳ್ಳು ಆರೋಪ, ಅಪಪ್ರಚಾರ ಮಾಡಿದರೂ ಅದೆಲ್ಲವನ್ನೂ ತಿರಸ್ಕರಿಸಿ ರಾಜ್ಯದ ಜನತೆ ನಮ್ಮ ಕೈ ಹಿಡಿದಿದ್ದಾರೆ.

ಇತ್ತೀಚಿಗೆ ನಾವು ಹಾಸನದಲ್ಲಿ ನಾವು ಮಾಡಿದ ಸ್ವಾಭಿಮಾನಿ ಸಮಾವೇಷ ಐತಿಹಾಸಿಕವಾದದು. ಆದ್ದರಿಂದ ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿದ್ದಾರೆ

ರೋಣದಲ್ಲಿ 200 ಕೋಟಿ, ಹೆಚ್.ಡಿ.ಕೋಟೆಯಲ್ಲಿ ನೂರಾರು ಕೋಟಿ, ತುಮಕೂರಿನಲ್ಲಿ 1700 ಕೋಟಿ ರೂಪಾಯಿಯ ಅಭಿವೃದ್ಧಿ ಕೆಲಸಗಳನ್ನು ನಾವೇ ಉದ್ಘಾಟಿಸಿದ್ದೀವಿ. ಇವು ಉದಾಹರಣೆಗಳಷ್ಟೆ. ಪ್ರತೀ ಜಿಲ್ಲೆ, ಪ್ರತೀ ತಾಲ್ಲೂಕುಗಳಲ್ಲೂ ನೂರಾರು ಕೋಟಿಯ ಅಭಿವೃದ್ಧಿ ಕಡಲಸಗಳು ನಿರಂತರವಾಗಿ ಉದ್ಘಾಟನೆ ಆಗುತ್ತಲೇ ಇವೆ. ಬಜೆಟ್ಟಿನಲ್ಲಿ 120000 ಕೋಟಿ ಅಭಿವೃದ್ಧಿ ಹಣ ತೆಗೆದಿಡಲಾಗಿದೆ. ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇವೆ. 52009 ಕೋಟಿ ರೂಪಾಯಿ ಗ್ಯಾರಂಟಿಗಳ ಮೂಲಕ ಜನರ ಜೇಬಿಗೆ, ಜನರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ. ಹೀಗಾಗಿ ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ

ಹೀಗಾಗಿ ನಮ್ಮ ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಸತ್ಯವನ್ನು, ಸತ್ಯದ ಅಂಕಿ ಅಂಶಗಳನ್ನು ಜನರ ಮುಂದಿಟ್ಟು ತೋರಿಸಿದರೂ ಸಾಕು. ಸತ್ಯವನ್ನು ಮನೆ ಮನೆ ತಲುಪಿಸಿ ಎಂದು ಕರೆ ನೀಡಿದರು

ನಾವು 2013 ರಿಂದ 2018 ರವರೆಗೆ ಅಧಿಕಾರದಲ್ಲಿದ್ದಾಗ ಅವರು ಕೇಳಿದ್ದನ್ನೆಲ್ಲಾ CBI ತನಿಖೆಗೆ ಒಪ್ಪಿಸಿದೆವು. ಆದರೂ CBI ತನಿಖೆಯಲ್ಲಿ ಬಿಜೆಪಿಯ ಒಂದೂ ಆರೋಪ ಸಾಬೀತಾಗಲಿಲ್ಲ.

ಅವರು ಅಧಿಕಾರದಲ್ಲಿದ್ದಾಗ ನಾವು ಕೇಳಿದ ಒಂದನ್ನೂ CBI ತನಿಖೆಗೆ ಕೊಡಲಿಲ್ಲ. ಈಗ ಮತ್ತೆ ಅದೇ CBI ರಾಗ ಎಖೆಯುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು CBI ಅನ್ನು “ಚೋರ್ ಬಚಾವೋ ಸಂಸ್ಥೆ” ಎಂದಿದ್ದರು. ಈಗ ಇವರಿಗೆ CBI ಮೇಲೆ ಪ್ರೀತಿ ಬಂದಿದೆ ಎಂದರು.

ಜನ ಸಂಪರ್ಕ ಸಭೆ ಹೆಚ್ಚೆಚ್ಚು ಮಾಡಿ

ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆಗಳಲ್ಲಿ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ. ಹಣಕ್ಕೆ ಸಮಸ್ಯೆ ಇಲ್ಲ. ಹಣ ಇದೆ. ಜನರ ಕೆಲಸ ಮಾಡಿ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮನೆ ಕೊಡಲಿಲ್ಲ. ಬಿಜೆಪಿ ಯಾವ ಮುಖ ಇಟ್ಟುಕೊಂಡು ನಮ್ಮನ್ನು ಪ್ರಶ್ನಿಸುತ್ತಿದೆ ಎಂದು ಶಾಸಕರನ್ನು ಪ್ರಶ್ನಿಸಿದರು.

ಮಳೆ ಹಾನಿ ಸರಿಪಡಿಸಲು ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ.
ಮುಂದಿನ ವರ್ಷದಿಂದ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚುತ್ತದೆ. ಆಗ ಇನ್ನಷ್ಟು ಅಭಿವೃದ್ಧಿಯ ವೇಗ ಹೆಚ್ಚುತ್ತದೆ.

ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ

ಆದ್ದರಿಂದ ನಮ್ಮ ಶಾಸಕರು ಎದೆ ಎತ್ತಿ ಮಾತನಾಡಿ. ಅವರ ಬಾಯಿ ಮುಚ್ಚಿಸಿ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...