ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರತಿಪಕ್ಷ ನಾಯಕರಿಗೆ ಅಗತ್ಯ ಭದ್ರತೆ ಕಲ್ಪಿಸಲಾಗುವುದು. ಮೊಟ್ಟೆ ಪ್ರಕರಣದ ಬಗ್ಗೆ ನಾನೇ ಖುದ್ದಾಗಿ ಸಿದ್ದರಾಮಯ್ಯನವರೊಂದಿಗೆ ಮಾತನಾಡಿದ್ದೇನೆ. ಯಾರಿಗಾದರೂ ನಿಮಗೆ ಬೆದರಿಕೆ ಕರೆ ಬಂದಿದೆಯೇ ಎಂದು ವಿಚಾರಿಸಿದ್ದೇನೆ. ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿದ್ದು, ಅವರಿಗೆ ಎಲ್ಲಾ ರೀತಿಯ ಭದ್ರತೆ ಒದಗಿಸುವಂತೆ ಡಿಜಿ ಐಜಿಪಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.