ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಖಂಡರೊಬ್ಬರು ಟಿ. ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿದ್ದಾರೆ. ನಮ್ಮ ಕಾರ್ಯಕರ್ತರನ್ನು ಬೀದಿಗಿಳಿಸಿದರೆ ಮುಖ್ಯಮಂತ್ರಿ ಕೂಡ ಓಡಾಡದಂತಾಗುತ್ತದೆ ಎಂದು ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ದೂರು ನೀಡಿದ್ದಾರೆ.
ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ರೀತಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಆಗಲು, ಅಧಿಕಾರ ಹಿಡಿಯಲು ಹವಣಿಸುತ್ತಿರುವ ಸಿದ್ದರಾಮಯ್ಯ ಧರ್ಮವಾರು ಜನರನ್ನು ಎತ್ತಿ ಕಟ್ಟುತ್ತಿದ್ದಾರೆ. ಸಮಾಜದ ಶಾಂತಿ ಕದಡುವ ಹೇಳಿಕೆಗಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.