ಬೆಂಗಳೂರು: ದೆಹಲಿಯಲ್ಲಿ ನಡೆದ ಮೊದಲ ಆವೃತ್ತಿಯ ಖೋಖೋ ವಿಶ್ವಕಪ್ ಪಂದ್ಯದಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು ಜಯಗಳಿಸಿ ಚಾಂಪಿಯನ್ ಆಗಿವೆ.
ಪುರುಷರ ತಂಡ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದೆ. ಭಾರತ 54, ನೇಪಾಳ ತಂಡಕ್ಕೆ 36 ಅಂಕ ಬಂದಿವೆ. ಮಹಿಳಾ ತಂಡ ಕೂಡ ಖೋಖೋ ಚಾಂಪಿಯನ್ ಆಗಿದೆ. ದೆಹಲಿಯಲ್ಲಿ ನಡೆದ ಮೊದಲ ಆವೃತ್ತಿಯ ಖೋಖೋ ವಿಶ್ವಕಪ್ ನಲ್ಲಿ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ತಂಡ ಫೈನಲ್ ಪಂದ್ಯದಲ್ಲಿ ನೇಪಾಳವನ್ನು 78 -40 ಅಂಕಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಆಗಿದೆ.
ಮೊಟ್ಟ ಮೊದಲ ಖೋಖೋ ವಿಶ್ವಕಪ್ ಗೆದ್ದು, ಚಾಂಪಿಯನ್ ಆದ ಭಾರತದ ಪುರುಷರ ಮತ್ತು ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
“ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಅಭಿನಂದನೆಗಳು.
ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ.
ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ” ಎಂದು ಸಿಎಂ ಸಿಸದ್ಧರಾಮಯ್ಯ ತಿಳಿಸಿದ್ದಾರೆ.
ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಅಭಿನಂದನೆಗಳು.
ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ.ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ… pic.twitter.com/GMEf5OAi0L
— Siddaramaiah (@siddaramaiah) January 19, 2025