alex Certify ಸಿದ್ಧರಾಮಯ್ಯ ಕ್ಯಾಂಪ್ ನಲ್ಲಿ ಕಾಣಿಸಿಕೊಂಡ ಬಿಜೆಪಿ ಮುಖಂಡ, ಕಾಂಗ್ರೆಸ್ ಸೇರ್ತಾರಾ ಮಾಜಿ ಸಚಿವ ಎ. ಮಂಜು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ಕ್ಯಾಂಪ್ ನಲ್ಲಿ ಕಾಣಿಸಿಕೊಂಡ ಬಿಜೆಪಿ ಮುಖಂಡ, ಕಾಂಗ್ರೆಸ್ ಸೇರ್ತಾರಾ ಮಾಜಿ ಸಚಿವ ಎ. ಮಂಜು…?

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಚಿವ ಎ. ಮಂಜು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತಂತೆ ಚರ್ಚೆ ನಡೆಸಿದ್ದಾರೆ. ಬಿಜೆಪಿಯಲ್ಲಿದ್ದರೂ ಮಾಜಿ ಸಚಿವ ಎ. ಮಂಜು ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪುತ್ರ ಡಾ. ಮಂಥರ್ ಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಿದ್ದರು.

ಬಿಜೆಪಿಯಲ್ಲಿದ್ದುಕೊಂಡೇ ಪುತ್ರನಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಅವರು ಈಗ ಮತ್ತೆ ಸಿದ್ದರಾಮಯ್ಯನವರ ಕ್ಯಾಂಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಪರಿಷತ್ ಚುನಾವಣೆ ಆರಂಭವಾದ ನಂತರ ಎ. ಮಂಜು ಬಿಜೆಪಿಯಲ್ಲಿದ್ದರೂ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದರಿಂದ ಅವರಿಗೆ ನೀಡಿದ ಜವಾಬ್ದಾರಿಯಿಂದ ಬಿಜೆಪಿ ಮುಕ್ತಗೊಳಿಸಿದ್ದು, ಇದರಿಂದ ಬೇಸತ್ತ ಅವರು ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...