alex Certify ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು: ರಾಜ್ಯ ಬಿಜೆಪಿ ಸರ್ಕಾರ ವಿಸರ್ಜನೆಗೆ ಸಿದ್ಧರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು: ರಾಜ್ಯ ಬಿಜೆಪಿ ಸರ್ಕಾರ ವಿಸರ್ಜನೆಗೆ ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಕಾಂಗ್ರೆಸ್ ಗೆಲುವಿಗೆ ಕಾರಣರಾದ ಮತದಾರರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ. ಈ ಚುನಾವಣೆ ಫಲಿತಾಂಶದಿಂದ ಅದು ಸ್ಪಷ್ಟವಾಗಿದೆ. ಕೊರೋನಾ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಜನರಿಂದ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗಿದೆ. ತಕ್ಕ ಪಾಠ ಕಲಿಸುವ ಮೂಲಕ ಮತದಾರರು ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಿದ್ದಾರೆ.

ಜನರ ಸಿಟ್ಟಿಗೆ ಗುರಿಯಾಗಿರುವುದರಿಂದ ಸರ್ಕಾರ ವಿಸರ್ಜಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರ ವಿಸರ್ಜಿಸುವುದು ಒಳ್ಳೆಯದು. ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...