alex Certify ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ: ಫ್ರೀ ವಿದ್ಯುತ್, ಮಾಸಿಕ 2 ಸಾವಿರ ರೂ. ಬಳಿಕ ಮೂರನೇ ಭರವಸೆ ನೀಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ: ಫ್ರೀ ವಿದ್ಯುತ್, ಮಾಸಿಕ 2 ಸಾವಿರ ರೂ. ಬಳಿಕ ಮೂರನೇ ಭರವಸೆ ನೀಡಿದ ಕಾಂಗ್ರೆಸ್

ಬಾಗಲಕೋಟೆ: ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬ ನಿರ್ವಹಣೆಗಾಗಿ ಮಹಿಳೆಯರಿಗೆ ಮಾಸಿಕ 2000 ರೂಪಾಯಿ ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಿದೆ.

ಬಾಗಲಕೋಟೆಯಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಭರವಸೆ ಬಗ್ಗೆ ತಿಳಿಸಿದ್ದು, ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಇದುವರೆಗೆ ಬಿಪಿಎಲ್ ಕುಟುಂಬಗಳಿಗೆ ನೀಡಲಾಗುತ್ತಿದ್ದ ಅಕ್ಕಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಕಡಿಮೆ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...