alex Certify ಜನತೆಯ ಮುಂದೆ ಬೆತ್ತಲಾದ ಬಿಜೆಪಿ, ಆಸ್ಪತ್ರೆಯಲ್ಲಿ ಸಿಎಂ – ಐಸಿಯುನಲ್ಲಿ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನತೆಯ ಮುಂದೆ ಬೆತ್ತಲಾದ ಬಿಜೆಪಿ, ಆಸ್ಪತ್ರೆಯಲ್ಲಿ ಸಿಎಂ – ಐಸಿಯುನಲ್ಲಿ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದ್ದಾರೆ. ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ಭರಿಸುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನು ಇಲ್ಲ. ರೆಮ್ ಡೆಸಿವಿರ್ ನಂತಹ ಜೀವರಕ್ಷಕ ಔಷಧಗಳ ಕೊರತೆಯಿದೆ. ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ. ಬಿಜೆಪಿ ಸರ್ಕಾರ ಐಸಿಯುನಲ್ಲಿದೆ ಎಂದು ಟೀಕಿಸಿದ್ದಾರೆ.

ವರ್ಷದ ಹಿಂದೆ ಮೊದಲ ಬಾರಿ ಕೊರೋನಾ ಬಂದ ಸಂದರ್ಭದಲ್ಲಿ ಅದು ಅನಿರೀಕ್ಷಿತ ಆಘಾತ. 1 ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೋನಾ ಎದುರಿಸಲು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೋನಾವನ್ನು ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರ್ಕಾರ ಈಗ ಕೈಚೆಲ್ಲಿ ಕುಳಿತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಮುಖ್ಯಮಂತ್ರಿಯವರಿಗೆ ಸಚಿವರ ಮೇಲಾಗಲಿ ಶಾಸಕರ ಮೇಲಾಗಲಿ ನಿಯಂತ್ರಣಬವೇ ಇಲ್ಲದೆ ನಿರ್ಮಾಣಗೊಂಡಿರುವ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ದೂರಿದ್ದಾರೆ.

ಕೊರೋನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ, ನಿರ್ಬಂಧ, ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ ಕೊರೋನಾ ಎದುರಿಸಲು ಬಿಜೆಪಿ ಸರ್ಕಾರ ಏನು ಮಾಡಿದೆ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತ ಪತ್ರ ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...