ನವದೆಹಲಿ: ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದೆ.
ಇದರಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಮುಖ್ಯಮಂತ್ರಿಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 931 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು 322 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿ ಹೊಂದಿದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ 55 ಲಕ್ಷ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ, ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದು ಕೋಟಿ ರೂ ಮೌಲ್ಯದ ಆಸ್ತಿ ಬಂದಿದ್ದಾರೆ.
ಪೆಮಾ ಖಂಡು 180 ಕೋಟಿ ರೂ. ಸಾಲ ಹೊಂದಿದ್ದಾರೆ, ಸಿದ್ದರಾಮಯ್ಯ 23 ಕೋಟಿ ರೂ., ಚಂದ್ರಬಾಬು ನಾಯ್ಡು 10 ಕೋಟಿ ರೂ. ಸಾಲ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.