
ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಮೊದಲಿನಿಂದಲೂ ಷಡ್ಯಂತ್ರದ ಆರೋಪ ಕೇಳಿಬರುತ್ತಿದೆ. ನನ್ನನ್ನು ಸಿಲುಕಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಅವರಿಗೆ ಹಾಗೆ ಅನ್ನಿಸಿರಬಹುದು. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂದು ಹೇಳಿದ್ದಾರೆ.
ಇಂತಹ ಪ್ರಕರಣಗಳಿಂದ ರಾಜಕಾರಣಿಗಳ ಮಾನ ಹೋಗುತ್ತದೆ. ಜನರು ರಾಜಕಾರಣಿಗಳ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಅವರು ಲಘುವಾಗಿ ಮಾತನಾಡಲು ಶುರು ಮಾಡಿದರೆ ಏನಾಗುತ್ತದೆ ಎಂದ ಅವರು, ಇನ್ನು ಮುಂದೆ ಜೆಡಿಎಸ್ ಜೊತೆಗೆ ಮೈತ್ತಿ ಇರುವುದಿಲ್ಲ ಎಂದು ಹೇಳಿದ್ದಾರೆ.