ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಇಂದು ವಿಚಾರಣೆಗೆ ಖುದ್ದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಮೂವರು ನಾಯಕರಿಗೆ ಕೋರ್ಟ್ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೋರ್ಟ್ ಗೆ ಹಾಜರಾಗಲಿದ್ದಾರೆ.
ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೂಡ ವಿಚಾರಣೆಯಿಂದ ವಿನಾಯಿತಿ ಕೇಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಕಳೆದ ಬಾರಿಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದಿನ ಹಾಜರಾತಿಯಿಂದ ರಾಹುಲ್ ಗಾಂಧಿ ವಿನಾಯಿತಿ ಕೇಳುವ ಸಾಧ್ಯತೆ ಇದೆ. ವಿನಾಯಿತಿ ಸಿಗದಿದ್ದರೆ ಜಾಮೀನು ರಹಿತ ವಾರೆಂಟ್ ಜಾರಿ ಮಡುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ದರಪಟ್ಟಿ ಜಾಹೀರಾತು ನೀಡಿ ಅಪಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕೋರ್ಟ್ ಮೆಟ್ಟಿಲೇರಿತ್ತು.