![](https://kannadadunia.com/wp-content/uploads/2021/12/siddaramaiah-dh-1040238-1634114978.jpg)
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ತಮ್ಮ ನೇತೃತ್ವದಲ್ಲಿ ನಡೆಯುತ್ತದೆ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲಿ ನಂಬಿಕೆ ಇಟ್ಟಿದ್ದು, ಮುಂದಿನ ವಿಧಾನಸಭೆ ಚುನಾವಣೆ ಕೂಡ ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರು ಪಕ್ಷದಲ್ಲಿದ್ದಾರೆ. ನಾನು ಶಾಸಕಾಂಗ ಪಕ್ಷದ ನಾಯಕನಾಗಿದ್ದೇನೆ. ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲೇ ಎದುರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ತಮ್ಮನ್ನು ಪೂರ್ವಭಾವಿ ಸಭೆ ನಡೆಸಬಾರದು. ಇದರಿಂದ ತಪ್ಪು ಸಂದೇಶ ಹೋಗುತ್ತದೆ ಎಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಿದ್ದರಾಮಯ್ಯ ಡಿಕೆಶಿಗೆ ತಾಕೀತು ಮಾಡಿದ್ದರು.