ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ತಿರ್ಪು ಪ್ರಕಟವಾಗುತ್ತಿದ್ದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳು ಸಿಎಂ ಕಾವೇರಿ ನಿವಾಸಕ್ಕೆ ದೌಡಾಯಿಸಿದ್ದಾರೆ. ಸಚಿವರ ದಂಡೇ ಸಿಎಂ ನಿವಾಸಕ್ಕೆ ಅಗಮಿಸಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಧೈರ್ಯ ತುಂಬುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಕೃಷ್ಣಷ್ಣ ಬೈರೇಗೌಡ, ಎಂ.ಬಿ.ಪಾಟೀಲ್, ಶಿವರಾಜ್ ತಂಗಡಿಗಿ, ಸಂತೋಷ್ ಲಾಡ್ ಸೇರಿದಂತೆ ಹಲವು ಸಚಿವರು, ಆಪ್ತರು ವಕೀಲರು ಆಗಮಿಸಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಹೈಕೋರ್ಟ್ ತೀರ್ಪಿನ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಂದಿನ ನಡೆ, ಕಾನೂನು ಹೋರಾಟಗಳ ಬಗ್ಗೆಯೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗುತ್ತಿದೆ.