alex Certify ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಸಿದ್ಧರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಶಾಕ್: ಒಟ್ಟಿಗೆ ಬಸ್ ಯಾತ್ರೆಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಸಿದ್ಧರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಶಾಕ್: ಒಟ್ಟಿಗೆ ಬಸ್ ಯಾತ್ರೆಗೆ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತ್ಯೇಕ ರ್ಯಾಲಿ ನಡೆಸಲು ಹೈಕಮಾಂಡ್ ಬ್ರೇಕ್ ಹಾಕಿದ್ದು, ಪ್ರತ್ಯೇಕ ಯಾತ್ರೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿಲ್ಲ.

ಪ್ರತ್ಯೇಕ ಬಸ್ ಯಾತ್ರೆ ಕೈಗೊಳ್ಳುವುದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಒಗ್ಗಟ್ಟಾಗಿ ಒಂದೇ ತಂಡದಲ್ಲಿ ಬಸ್ ಯಾತ್ರೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಒಂದೇ ತಂಡದಲ್ಲಿ ಮೊದಲು 150 ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದರು. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವರಿಷ್ಠರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...