ಬೆಂಗಳೂರು: ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಜಾತಿವಾರು, ಪ್ರಾದೇಶಿಕವಾರು ಸಮತೋಲನ ಕಾಯ್ದುಕೊಳ್ಳುವ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.
ಸಿಎಂ, ಡಿಸಿಎಂ ಸೇರಿ 30 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಮೂರ್ನಾಲ್ಕು ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಸಂಪುಟಕ್ಕೆ ಪ್ರಮುಖವಾಗಿ ಸೇರಲಿರುವ ಸಮಭವನೀಯ ಸಚಿವ ಪಟ್ಟಿ ಇಂತಿದೆ.
ಶರಣಪ್ರಕಾಶ ಪಾಟೀಲ್, ಅಜಯ ಸಿಂಗ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ಈಶ್ವರ ಖಂಡ್ರೆ, ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ, ಯು.ಟಿ. ಖಾದರ್, ರಾಮಲಿಂಗಾ ರೆಡ್ಡಿ, ಕೃಷ್ಣಬೈರೇಗೌಡ. ಜಮೀರ್ ಅಹ್ಮದ್ ಖಾನ್. ಪರಮೇಶ್ವರ್. ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿವೆ ಎನ್ನಲಾಗಿದೆ.